ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ನಾಡಿನ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೋ ಲಾಂಚ್ ಮಾಡಿ ಶುಭ ಕೋರಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ನಿನ್ನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯನಂದ