UKG ವಿದ್ಯಾರ್ಥಿಯನ್ನು ಫೇಲ್ ಮಾಡಿದ್ದಕ್ಕಾಗಿ ಪೋಷಕರು ಮತ್ತು ರಾಜಕಾರಣಿಗಳಿಂದ ತೀವ್ರ ಆಕ್ರೋಶದ ನಂತರ ಎಚ್ಚೆತ್ತುಕೊಂಡ ಬೆಂಗಳೂರಿನ ಶಾಲೆಯೊಂದು ಅಂತಿಮವಾಗಿ ವಿದ್ಯಾರ್ಥಿಯ ಫಲಿತಾಂಶವನ್ನು ಪರಿಷ್ಕರಿಸಿದ್ದು, ಪಾಸ್ ಮಾಡಿದೆ. ಆನೇಕಲ್ನ ಸೇಂಟ್ ಜೋಸೆಫ್ ಚಾಮಿನಾಡೆ ಅಕಾಡೆಮಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯುಕೆಜಿ ವಿದ್ಯಾರ್ಥಿಯ ಪೋಷಕರಾದ ಮನೋಜ್ ಬಾದಲ್, ಶಾಲೆಯು ಅಂತಿಮವಾಗಿ ಫಲಿತಾಂಶವನ್ನು ಪರಿಷ್ಕರಿಸಿದ್ದು, ಆಕೆಯ ರಿಪೋರ್ಟ್ ಕಾರ್ಡ್ನಿಂದ ‘ಫೇಲ್’ ಪದವನ್ನು ತೆಗೆದುಹಾಕಿದೆ ಎಂದು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ, ಬಾದಲ್ ತನ್ನ ಯುಕೆಜಿ ವಿದ್ಯಾರ್ಥಿನಿಯನ್ನು