ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಕಿವಿಗೊಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಸಿಕ್ಕಿದೆ. ಕೇಂದ್ರ ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.