ತುಮಕೂರು: ಜಿಲ್ಲೆಯ ಮಧುಗಿರಿ ಮತ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಡಿಗೇನಹಳ್ಳಿ ಹೋಬಳಿಯಲ್ಲಿ ಕಳೆದ ವರ್ಷ ಕನಕ ಜಯಂತಿ ಆಚರಣೆಗೆ ಕೊಟ್ಟಿರುವ ಹಣ ವಾಪಸ್ಸು ನೀಡಬೇಕು ಇಲ್ಲವೇ ಜೆಡಿಎಸ್ ಗೆ ಬರಬೇಕೆಂದು ಜೆಡಿಎಸ್ ಮುಖಂಡ ರವಿಕುಮಾರ್ ಪೋನ್ ನಲ್ಲಿ ಕಿರುಕುಳ ನೀಡುತ್ತಿದ್ದಾರೆಂಬ ದೂರಿನ ಮೇರೆಗೆ ತಹಶೀಲ್ದಾರ್ ಅನೀಲ್ ಮತ್ತು ಮಧುಗಿರಿ ಕ್ಷೇತ್ರದ ಉಪ ಚುನಾವಣಾಧಿಕಾರಿಗಳೂ ದೂರು ಪಡೆದು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.