ಸ್ನೇಹಿತ ಮೇಲೆ ಸಹಚರರ ಜೊತೆಗೂಡಿ ಹಲ್ಲೆ ಮಾಡಿದ್ದೂ ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತ ಕೆರೆಹಳ್ಳಿ ಪುನೀತ್ ವಿರುದ್ಧ ಮಂಡ್ಯದ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ನನ್ನನ್ನು ದೂರವಾಣಿ ಕರೆ ಮಾಡಿ ಕರೆದುಕೊಂಡು, ತನ್ನ ಸಹಚರರ ಜೊತೆ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಕಪಾಳಮೋಕ್ಷ ಮಾಡಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.