ಹುಬ್ಬಳ್ಳಿ: ನಗರದಲ್ಲಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಭೈರಿ ದೇವರಕೊಪ್ಪದ ಮಾಯಕಾರ ಕಾಲೋನಿಯಲ್ಲಿರುವ ನಿವಾಸದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ರಾತ್ರಿ 12 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.ಎರಡು ಸೋಫಾ ಸೆಟ್ ಬೆಂಕಿಗಾಹುತಿಯಾಗಿದ್ದು, ನಂತರ ಬೆಡ್ ರೂಮಿಗೂ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲ ವಸ್ತುಗಳ ಬೆಂಕಿಗೆ