ಬೆಂಗಳೂರು : ನಗರದಲ್ಲಿ ನಡೆದ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವಾಗ ಎಂಟು ಮಂದಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಎರಡು, ನಾರಾಯಣ ನೇತ್ರಾಲಯದಲ್ಲಿ ನಾಲ್ಕು ಹಾಗೂ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಒಂದು ಪ್ರಕರಣ ಗುರುವಾರ ಒಂದೇ ದಿನದಲ್ಲಿ ವರದಿಯಾಗಿವೆ. ಭಾನುವಾರವಷ್ಟೇ ಪಟಾಕಿ ಹಚ್ಚುತ್ತಿದ್ದುದನ್ನು ನೋಡುತ್ತಾ ನಿಂತಿದ್ದ 10 ವರ್ಷದ ಬಾಲಕನ ಕಣ್ಣುಗಳಿಗೆ ಕಿಡಿ ಹಾರಿ ಗಾಯವಾಗಿದೆ. ತಕ್ಷಣಕ್ಕೆ