ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಮೊನ್ನೆಯಷ್ಟೇ ಬೆಳ್ಳಂಬೆಳಗ್ಗೆ ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದರು. ಇದರ ಹೊರತಾಗಿಯೂ ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ತಲ್ವಾರ್ ನಿಂದ ಬೀಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ರೌಡಿಶೀಟರ್ ಮೇಲೆ ಫೈಯರ್ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಫೈರ್ ಮಾಡಿದ್ದಾರೆ.ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಮಂಟೂರು ರಸ್ತೆಯಲ್ಲಿ ಸತೀಶ್ ಗೋನಾ ಮೇಲೆ