ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಶ್ರೀರಾಮ ಸೇನೆ ಸಂಘಟನೆ ಮುಖಂಡರ ಮೇಲೆ ಫೈರಿಂಗ್ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್, ಕಾರು ಚಾಲಕ ಮನೋಜ್ ದೇಸೂರಕರ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯಿಂದ ಕುಸಿದುಬಿದ್ದ ಮುಖಂಡರನ್ನು ಸ್ಥಳೀಯರ ನೆರವಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ,