ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ.