ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ