ದೇಶದಾದ್ಯಂತ ತೀವ್ರ ಭೀತಿ ಸೃಷ್ಠಿಸಿರುವ ಕೋರೋನಾ ವೈರಸ್ ಸೋಂಕಿನಿಂದಾಗಿ ಕಲಬುರಗಿಯಲ್ಲಿ ಮೊದಲ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಐಸೋಲೇಷನ್ ವಾರ್ಡ್ ಗಳನ್ನು ಸಿದ್ಧಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಇ.ಎಸ್.ಐ.ಸಿ. ಮೆಡಿಕಲ್ ಕಾಲೇಜಿನಲ್ಲಿ 200 ಕ್ವಾರಂಟೈನ್ ವಾರ್ಡ್, 16 ಐಸೋಲೇಷನ್ ವಾರ್ಡ್ (2 ವೆಂಟಿಲೇಟರ್) ದೊಂದಿಗೆ ಚಿಕಿತ್ಸೆಗೆ ಸಿದ್ಧಗೊಂಡಿವೆ ಎಂದು ನವದೆಹಲಿಯ ಇ.ಎಸ್.ಐ.ಸಿ ಕಾರ್ಪೋರೇಷನ್ ಸದಸ್ಯ ಶಿವಪ್ರಸಾದ ತಿವಾರಿ ಹೇಳಿದ್ದಾರೆ.ಕಲಬುರಗಿ ಇ.ಎಸ್.ಐ.ಸಿ. ಮೆಡಿಕಲ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿ