ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಹೆಚ್ಎಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿಯಾಗಿದೆ. ಟಿಕೆಟ್ ಕೈತಪ್ಪಿದವರು ಬಂಡಾಯ ಏಳುವ ಸಾಧ್ಯತೆ