ಮೈಸೂರು : ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣದ ವಿಚಾರದಲ್ಲಿ ವಿವಾದಿತ ಪ್ರದೇಶವಾಗಿದ್ದ ಎನ್ಟಿಎಂಎಸ್ ಶಾಲೆಯ ಕಟ್ಟಡವನ್ನು ಕೊನೆಗೂ ರಾತ್ರೋರಾತ್ರಿ ಧ್ವಂಸ ಮಾಡಲಾಗಿದೆ.ಈ ಮೂಲಕ ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಇತಿಹಾಸ ಪುಟ ಸೇರಿದೆ. ರಾಜ್ಯ ಸರ್ಕಾರ ಶಾಲೆಯ ಜಾಗವನ್ನು ವಿವೇಕ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರ ಮಾಡಿತ್ತು.ಇದನ್ನು ಕೆಲ ಸಂಘಟನೆಗಳು ಪ್ರಶ್ನಿಸಿ ಹೈಕೋರ್ಟ್ಗೆ ದಾವೆ ಹೂಡಿದ್ದವು. ಹೈಕೋರ್ಟ್ನಲ್ಲಿ ರಾಮಕೃಷ್ಣ ಆಶ್ರಮದ ಪರ ತೀರ್ಪು