ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ದಲಿತ ಬಾಲಕಿಯ ಮೇಲೆ ಸ್ಲೀಪರ್ ಬಸ್ನಲ್ಲಿ ಅತ್ಯಾಚಾರ ನಡೆಸಿದ್ದ ಆರೋಪಿ ಬೆಳ್ತಂಗಡಿ ತಾಲೂಕು ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತನಿಗೆ 7 ವರ್ಷ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿಯನ್ನು ಅಪಹರಣ ಮಾಡಿದ ತಪ್ಪಿಗಾಗಿ ಐಪಿಸಿ 366ಎ ಅಡಿಯಲ್ಲಿ 3 ವರ್ಷ ಕಠಿಣ ಶಿಕ್ಷೆ ಮತ್ತು