ಮಂಗಳೂರು: ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆಯಿಂದಲೂ ತೀವ್ರ ಹುಡುಕಾಟ ನಡೆಸುತ್ತಿದ್ದು, ಓರ್ವನ ಶವ ಪತ್ತೆಯಾಗಿದೆ.