ಕೋಲಾರ : ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ದುರಂತ ಅಂತ್ಯ ಕಂಡಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಪೊಲೀಸ್ ತನಿಖೆಗೆ ಹೆದರಿ ಮನೆಯಲ್ಲಿ ನಿನ್ನೆ ಸಂಜೆ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬದ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು