ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯದ 4 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದ್ದು, ಜೂನ್ 10ರಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್ 30ರಂದು ಮುಗಿಯಲಿದೆ. ಈ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ