ನೂತನ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಆರಂಭಿಸುವ ಸಂಬಂಧ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ನಾಗರಿಕ ವಿಮಾನಯಾನ ಸಚಿವಾಲಯದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೋಸೈಟಿಯ ಹೈದ್ರಾಬಾದಿನ ಪ್ರಾದೇಶಿಕ ನಿರ್ದೇಶಕ ಎಂ.ಟಿ.ಬೇಗ್ ಅವರ ನೇತೃತ್ವದ ಭದ್ರತಾ ಸಮಿತಿ ಕಲಬುರಗಿಗೆ ಆಗಮಿಸಿದೆ.ಜಿಲ್ಲಾಧಿಕಾರಿ ವೆಂಕಟೇಶ ಕುಮಾರ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಸಮಿತಿ ಸದಸ್ಯರು, ಭದ್ರತೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ