ಕಲಬುರಗಿ ವಿಮಾನ ನಿಲ್ದಾಣದ ಸಂಪೂರ್ಣ ಕಾಮಗಾರಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಿ ವಿಮಾನ ಹಾರಾಟ ಪ್ರಾರಂಭಗೊಳಿಸಲಾಗುವುದು ಎಂದು ಅಧಿಕಾರಿಗಳು ವಾಗ್ದಾನ ಮಾಡಿದ್ದಾರೆ. ಅದರಂತೆ ನಡೆದುಕೊಳ್ಳುಬೇಕು ಎಂದು ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.ಅವರು ಶನಿವಾರ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಯನ್ನು ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿ, ವಿಮಾನ ನಿಲ್ದಾಣದ ಎಲ್ಲ ಕಟ್ಟಡ ಕಾಮಗಾರಿಗಳು ಹಾಗೂ ರನ್ ವೇ ನಿರ್ಮಾಣ ಪೂರ್ಣಗೊಂಡಿದೆ. ಕೇವಲ ವಿದ್ಯುತ್ ಕಾಮಗಾರಿ ಮಾತ್ರ