ಫ್ಲಿಪ್ ಕಾರ್ಟ್ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಪತ್ನಿ

ಬೆಂಗಳೂರು| pavithra| Last Modified ಗುರುವಾರ, 5 ಮಾರ್ಚ್ 2020 (10:04 IST)
ಬೆಂಗಳೂರು : ಫ್ಲಿಪ್ ಕಾರ್ಟ್ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೇ ಪತ್ನಿಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಸಚಿನ್ ಬನ್ಸಾಲ್ ಮದುವೆಯ ವೇಳೆ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ ಕಾರಣ ಅವರಿಗೆ ಹಣ ನೀಡಿದ್ದರೂ ಕೂಡ ಇದೀಗ ಮತ್ತೆ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅಲ್ಲದೇ ತನ್ನ ನಾದಿನಿ ಮೇಲೆಯೂ  ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪತ್ನಿ ಪ್ರಿಯಾ ಬನ್ಸಾಲ್ ಆರೋಪ ಮಾಡಿದ್ದಾರೆ.


ಈ ಬಗ್ಗೆ ಪ್ರಿಯಾ ಬನ್ಸಾಲ್ ಸಚಿನ್ ಬನ್ಸಾಲ್ ವಿರುದ್ಧ ಕೋರಮಂಗಲ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :