ಕಬಿನಿ ಹಾಗೂ ಕೆಆರ್ ಎಸ್ ಗಳಿಂದ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಿರುವುದರಿಂದ ಗಡಿ ಜಿಲ್ಲೆಯ ಬಹುತೇಕ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಸಂತ್ರಸ್ಥರ ಪುನರ್ವಸತಿಗಾಗಿ ಗಂಜಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ.ಹೆಚ್.ಡಿ ಕೋಟೆಯ ಕಬಿನಿ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯಗಳಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವುದರಿಂದ ಕಾವೇರಿ ಜಲಾಯನ ಪ್ರದೇಶದಲ್ಲಿ ನೀರು ಧಾರಾಕಾರ ಹರಿಯುತ್ತಿದೆ. ಗಡಿ ಜಿಲ್ಲೆ ಚಾಮರಾಜನಗರದ ಬಹುತೇಕ ಗ್ರಾಮಗಳು ಮುಳುಗಡೆಯ ಭೀತಿಯಲ್ಲಿವೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ,