ಬೆಂಗಳೂರು : ಕೃಷ್ಣಾ ನದಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾದ ಹಿನ್ನೆಲೆಯಲ್ಲಿ, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಸಿಎಂ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಆದ ಕಾರಣ ಸಿಎಂ ದೆಹಲಿ ಪ್ರವಾಸ ರದ್ದುಗೊಳಿಸಿ, ಕರ್ನಾಟಕ ವಿಪತ್ತು ನಿರ್ವಹಣಾ ಸಭೆ ಕರೆಯುವಂತೆ ಹಾಗೂ ಕೂಡಲೇ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳುವಂತೆ ಕೋರಿ ಮಾಜಿ ಸಚಿವ