ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ಶುಕ್ರವಾರದಿಂದ ಆರಂಭವಾಗಲಿದೆ. ನಾಳೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಲಾಲ್ ಬಾಗ್ ಶೋ ಉದ್ಘಾಟಿಸಲಿದ್ದಾರೆ. ಆ.4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ. ಜನರಿಗೆ ಯಾವುದೇ ಸಮಸ್ಯೆಗಳಗಾದಂತೆ ಬಿಗಿ ಬಂದೋಬಸ್ತ್ ಮಾಡಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಸಸ್ಯಕಾಶಿ ಲಾಲ್ ಬಾಗ್ನಲ್ಲಿ 76ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214ನೇ ಫ್ಲವರ್ ಶೋ