ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಲಾಲ್ಬಾಗ್ನಲ್ಲಿ ಆಯೋಜಿಸಿರುವ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಲಾಲ್ಬಾಗ್ ಉದ್ಯಾನವು ಇಡೀ ವಿಶ್ವದಲ್ಲಿಯೇ ಪ್ರಸಿದ್ಧವಾಗಿದೆ. ಸುಮಾರು 240 ಎಕರೆ ವಿಸ್ತೀರ್ಣದಲ್ಲಿದ್ದು, ವಿವಿಧ ಜಾತಿಯ ಮರ ಗಿಡಗಳಿವೆ. ಬ್ರಿಟಿಷರ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಉದ್ಯಾನವು ಕೆಂಗಲ್ ಹನುಮಂತಯ್ಯ ಅವರು 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು,