ಕರಾವಳಿ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಕೊಂಚ ಕಡಿಮೆಯಾಗಿದ್ದರೂ ಸಾಕಷ್ಟು ಅವಾಂತರ ಸೃಷ್ಟಿಸಿದೆ.ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಜೊಯಿಡಾ ತಾಲೂಕಿನ ಜಗಲಪೇಟ ಗ್ರಾಮ ಪಂಚಾಯತ ವ್ಯಾಪ್ತಿಯ ತಿಂಬೋಲಿಗೆ ಸಂಪರ್ಕ ಕಲ್ಪಿಸುವ ಕಾಲುಸಂಕ ಕೊಚ್ಚಿಕೊಂಡು ಹೋಗಿರುವುದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಲೆಗೆ ತೆರಳುವ ಮಕ್ಕಳು ಜೀವ ಭಯದಿಂದಲೇ ಹಳ್ಳ ದಾಟಿ ಶಾಲೆಗೆ ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಭಾರಿ ಮಳೆ ಇರುವ ಕಾರಣ ಒಂದೆರೆಡು ದಿನ