ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತದಾರರ ದಾಹ ತಣಿಸುವುದಕ್ಕಿಂತ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೋಟೋ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.ಈ ಬಗ್ಗೆ ಟ್ವೀಟರ್ನಲ್ಲಿ ಮೋದಿ ಅವರು ಚುನಾವಣಾ ಪ್ರಚಾರದತ್ತ ಹೆಜ್ಜೆ ಹಾಕುತ್ತಿರುವ ಫೋಟೋ ಹಂಚಿಕೊಂಡಿರುವ ಅವರು, ‘ಎಂದೂ ತುಳಿಯದ ಹಾದಿ’ ಎಂದು ಕರ್ನಾಟಕ ಹಾಗೂ ತಮಿಳುನಾಡಿನ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡದ ಬಗ್ಗೆ ಟೀಕಿಸಿದ್ದಾರೆ. ಚುನಾವಣಾ ಪ್ರಚಾರ ಹಾಗೂ ಕಾವೇರಿ ಸಮಸ್ಯೆ ಇತ್ಯರ್ಥ