ಐಟಿ ದಾಳಿಗೂ, ನನಗೂ ಯಾವುದೇ ಸಂಬಂಧ ಇಲ್ಲ - ಪುಟ್ಟರಾಜು ಆರೋಪಕ್ಕೆ ತಿರುಗೇಟು ನೀಡಿದ ಸುಮಲತಾ

ಬೆಂಗಳೂರು, ಗುರುವಾರ, 28 ಮಾರ್ಚ್ 2019 (12:19 IST)

ಬೆಂಗಳೂರು : ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರೇ  ಐಟಿ ದಾಳಿ ಮಾಡಿಸಿದ್ದಾರೆ ಎಂದು ಸಚಿವ ಸಿಎಸ್ ಪುಟ್ಟರಾಜು ಆರೋಪಿಸಿರುವ  ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ, ನನಗೂ ಯಾವುದೇ ಸಂಬಂಧ ಇಲ್ಲ ಎಂದು ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ಪಷ್ಟ ಪಡಿಸಿದ್ದಾರೆ.


ಇಂದು ಬೆಳ್ಳಂಬೆಳಿಗ್ಗೆ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಅವರ ಸಂಬಂಧಿಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.  ಈ ಬಗ್ಗೆ ಆಕ್ರೊಶ ವ್ಯಕ್ತಪಡಿಸಿದ ಸಚಿವರು, ‘ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ದೂರು ನೀಡಿದ ಬಳಿಕ ಈ ದಾಳಿ ನಡೆಸಲಾಗಿದೆ. ಇದರ ಹಿಂದೆ ಅವರ ಕೈವಾಡವಿದೆ ಎಂದು ಪರೋಕ್ಷವಾಗಿ ಸುಮಲತಾ ಅವರ ಮೇಲೆ ಆರೋಪ ಮಾಡಿದ್ದಾರೆ.


ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸುಮಲತಾ ಅಂಬರೀಶ್, ಐಟಿ ದಾಳಿಯ ಬಗ್ಗೆ ಏನೆಂದು ಉತ್ತರಿಸುವುದೆಂದು ತಿಳಿಯುತ್ತಿಲ್ಲ. ಐಟಿ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನಗೆ ಅಷ್ಟೊಂದು ಪವರ್ ಇದೆ ಅಂದ್ರೆ ಸಂತೋಷ. ಆದರೆ ನಮ್ಮ ಕುಟುಂಬಕ್ಕೆ ಪುಟ್ಟರಾಜು ಆತ್ಮೀಯರಾಗಿದ್ದರು. ನೆನ್ನೆ ಮೊನ್ನೆಯವರೆಗೆ ಅಕ್ಕ ಎಂದು ಕರೆಯುತಿದ್ದರು. ನಾನು ಎಲ್ಲಿಯೂ ಸಚಿವ ಸಿಎಸ್ ಪುಟ್ಟರಾಜು ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.


.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ; ಇದರ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೈವಾಡವಿದೆ ಎಂದ ಸಚಿವ

ಮಂಡ್ಯ :, ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ...

news

ಸರ್ವಾಧಿಕಾರಿ ಕಿಮ್‌ ಎದುರು ನಿಂತು ಫೋಟೊ ತೆಗೆದ ಫೋಟೋಗ್ರಾಫರ್‌ ಗೆ ಆದ ಗತಿ ಏನು ಗೊತ್ತಾ?

ಉತ್ತರ ಕೊರಿಯಾ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್ ಉನ್ ನ ಪೋಟೊ ತೆಗೆಯಲು ಕಿಮ್‌ ನ ವೈಯಕ್ತಿಕ ...

news

ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರ ಮೇಲೆ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಡೆಸಲಿದ್ದಾರೆ- ಸಿಎಂ ಕುಮಾರಸ್ವಾಮಿ

ಮಂಡ್ಯ : ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ...

news

ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣದಲ್ಲಿ ನೋವಿನ ಛಾಯೆ ಇಲ್ಲ, ಕೇವಲ ಸಿನಿಮಾ ಡೈಲಾಗಷ್ಟೇ-ಸುಮಲತಾ ವಿರುದ್ಧ ಸಿಎಂ ವಾಗ್ದಾಳಿ

ಮಂಡ್ಯ : ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣ ಮಾಡಿದ ವಿಡಿಯೋವನ್ನು ನೋಡಿದರೆ ಅವರಲ್ಲಿ ಯಾವುದೇ ನೋವಿನ ಛಾಯೆ ...