ಬೆಂಗಳೂರು : ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್ ಕಡೆ ತಿರುಗಿಯೂ ನೋಡುವುದಿಲ್ಲ. ಕಾಂಗ್ರೆಸ್ ಸೇರುವುದು ಕನಸಿನ ಮಾತು ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಉಪ ಚುನಾವಣೆ ಬಗ್ಗೆ ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ನಮಗೆ ಗೊತ್ತು. ನಾವು ಅಭಿವೃದ್ಧಿ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇವೆ. ನಾವು ಮತ್ತೆ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲ್ಲುತ್ತೇನೆ.