ಶ್ರೀರಾಮನ ಕುರಿತು ವಿವಾದಿತ ಹೇಳಿಕೆ ನೀಡಿರುವ ಪ್ರೊ.ಕೆ.ಎಸ್.ಭಗವಾನ್ ಅವರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆಗಳು ಮುಂದುವರಿದಿವೆ.ಮೈಸೂರಿನಲ್ಲಿ ನವಜೀವನ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರು ಇತ್ತೀಚೆಗೆ ಹಿಂದೂ ಗ್ರಂಥ ರಾಮಾಯಣದ ಶ್ರೀರಾಮನ ವಿರುದ್ಧ ನೀಡಿರುವ ಹೇಳಿಕೆ ಆಧರಿಸಿ ಭಾರತೀಯ ಹಿಂದೂ ಧರ್ಮ ಉಲ್ಲೇಖಿತ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.