ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ 1000 ಉದ್ಯೋಗಿಗಳನ್ನು ಸಿಂಗಾಪೂರ್ ಪ್ರವಾಸಕ್ಕಾಗಿ ಕಳುಹಿಸಲು ಸರಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಂತ್ರಗಳ ಬಳಕೆಯಿಂದ ನಗರವನ್ನು ಹೇಗೆ ಸ್ವಚ್ಚ ಮಾಡಬಹುದು ಎನ್ನುವ ಬಗ್ಗೆ ಅಧ್ಯಯನ ಪ್ರವಾಸಕ್ಕಾಗಿ ಪೌರ ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ. ಸಿಂಗಾಪೂರ್ದಲ್ಲಿ ಅಳವಡಿಸಿಕೊಂಡಿರುವ ಸ್ವಚ್ಚತೆಯ ಬಗ್ಗೆ ತಿಳುವಳಿಕೆ ಪಡೆದುಕೊಳ್ಳಲು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು