ಚಿಕ್ಕಮಗಳೂರು : ಮೀಸಲು ಅರಣ್ಯಕ್ಕೆ ಆಕಸ್ಮಿಕ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸೋಮನಕಾಡು ಅರಣ್ಯದಲ್ಲಿ ನಡೆದಿದೆ.ಚಿಕ್ಕಮಗಳೂರು -ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದ ನೆಲೆಬೀಡು. ಮುಗಿಲೆತ್ತರದ ಬೆಟ್ಟ-ಗುಡ್ಡಗಳು ನೋಡುಗರನ್ನು ಕೈಬಿಸಿ ಕರೆಯುತ್ತಿವೆ.ಆದರೆ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಸೋಮನಕಾಡು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಕೊಟ್ಟಿದ್ದು ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.ದಟ್ಟಕಾನನವಾದ ಕಾರಣ ಅರಣ್ಯ