ವಿದೇಶೀ ವಿದ್ಯಾರ್ಥಿಯೊಬ್ಬಳು ಹಾಸ್ಟೇಲ್ ನ ೬ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಉಗಾಂಡ ಮೂಲದ ಆಸೀನ ಆಗಷ್ (26) ಎಂಬ ವಿದ್ಯಾರ್ಥಿನಿ ಬುಧವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ದ ಉದ್ವಿಗ್ನಗೊಂಡ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾಲೇಜಿನ ಕಚೇರಿ, ಕ್ಯಾಂಟೀನ್ ಕಿಟಕಿ ಗಾಜುಗಳನ್ನು ಒಡೆದು ಹಾಕಿ ಆಕ್ರೋಶವನ್ನು ಹೊರಹಾಕಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು