ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ 15 ಮಂದಿಯನ್ನೊಳಗೊಂಡ ಸಮಿತಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ 8 ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ. ಈಗ ನೇಮಿಸಿರುವ