ಬೆಳಗಾವಿ : ರಾಜ್ಯದ ಗಡಿ ವಿಚಾರದಲ್ಲಿ ನಾಡಿನ ಹಿತಕಾಪಾಡುವ ನಿಲುವು ಅಚಲವಾಗಿದೆ. ಈ ನಿಲುವಿನಿಂದ ಒಂದಿಂಚೂ ಕೂಡ ಹಿಂದೆ ಸರಿಯುವುದಿಲ್ಲ.ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ವಿಧಾನಸಭೆಯಲ್ಲಿಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವ್ಯಾಜ್ಯ ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿದೆ.ಗಡಿ ವ್ಯಾಜ್ಯಗಳು ಸಂವಿಧಾನಬದ್ಧವಾಗಿ