ಬೆಂಗಳೂರು : ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸರ್ಕಾರ ಮುಂದಾಗಿದೆ. ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ನಿರ್ಧರಿಸಲಾಗಿದೆ.ಬುಧವಾರ ಶಿಕ್ಷಣ ಸಚಿವ ನಾಗೇಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ