ಹಾಸನ : ಬಿಜೆಪಿ ಮಾಜಿ ಸಚಿವ ಎ.ಮಂಜು ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಮನಗರದಲ್ಲಿರುವ ಹೆಚ್ಡಿಕೆ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ್ದಾರೆ.ಬಳಿಕ ಬಿಡದಿಯ ತೋಟದ ಮನೆಯಲ್ಲಿ ಆಯೋಜಿಸಿದ್ದ ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಎ.ಮಂಜು,