ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಖಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ