ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು, ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು