ಒಂದೇ ಹುದ್ದೆಗೆ ನಾಲ್ವರ ಅಧಿಕಾರಗಳ ವರ್ಗಾವಣೆಗೆ ಶಿಫಾರಸ್ಸು ವಿಚಾರವಾಗಿ ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.ಅದು; ʼಕಾಸಿಗಾಗಿ ಪೋಸ್ಟಿಂಗ್!!ʼಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ,ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿಯಾಗಿದೆ.ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ