ಮಧ್ಯಂತರ ಚುನಾವಣೆಗೆ ಸಿದ್ಧರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು| pavithra| Last Modified ಮಂಗಳವಾರ, 3 ಸೆಪ್ಟಂಬರ್ 2019 (11:51 IST)
ಬೆಂಗಳೂರು : ಮಧ್ಯಂತರ ಚುನಾವಣೆಗೆ ಸಜ್ಜಾಗಿರುವ ಮಾಜಿ ಸಿಎಂ ಅವರು ಬೆಂಗಳೂರಿನ ಶಾಸಕರಿಗೂ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ಮಧ್ಯಂತರ ಚುನಾವಣೆಗೆ ನಡೆಯುವುದು ಖಚಿತ ಎಂದು ಭವಿಷ್ಯ ನುಡಿದಿದ್ದ ಸಿದ್ದರಾಮಯ್ಯ ,ಅಷ್ಟಕ್ಕೆ ಸುಮ್ಮನಾಗದೆ ಇದೀಗ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಕೈ ಶಾಸಕರಿಗೆ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


ಕೈ ನಾಯಕರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಜಮೀರ್ ಗೆ ಸೂಚನೆ ನೀಡಿದ್ದು, ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನ ಹುಡುಕುವಂತೆ ಹಾಗೂ ಯಾರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :