ಚಿಕ್ಕಬಳ್ಳಾಪುರ : ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (54) ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ವೆಂಕಟಸ್ವಾಮಿಯವರಿಗೆ ಕಳೆದ ಒಂದು ತಿಂಗಳಲ್ಲೇ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಆಗಲಿದ್ದು,