ಹಾಸನ : ಚುನಾವಣೆಗೆ ಹಾಸನ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸದ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಎ.ಮಂಜು ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಿನ್ನೆ ಸಂಜೆ ವೇಳೆಗೆ ದಿಢೀರ್ ಎಂದು ಹಾಸನದ ಆರ್ ಪುರಂ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಅವರು, ತರಾತುರಿಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹಾಸನ