ಬೆಂಗಳೂರು : ಡ್ರಗ್ಸ್ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ಗಿಂತ ಅನೇಕ ಪ್ರಮುಖ ವಿಚಾರಗಳಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಸಮಸ್ಯೆ ತಾರಕಕ್ಕೇರಿದೆ. ರಾಜ್ಯ ಬಿಜೆಪಿ ಸರ್ಕಾರದ ಪಾಲಿಗೆ ಕೋವಿಡ್ ಕಲ್ಪವೃಕ್ಷವಾಗಿದೆ. ನಾನು ಕೂಡ ಆಸ್ಪತ್ರೆ ನಡೆಸುತ್ತಿದ್ದೇನೆ. ಮಾಸ್ಕ್ ಸೇರಿದಂತೆ ಹಲವು ವಸ್ತುಗಳನ್ನು ಖರೀದಿಸುತ್ತೇನೆ. ವೈದ್ಯಕೀಯ ಉಪಕರಣಗಳ ಬಗ್ಗೆ ನಮಗೂ ಮಾಹಿತಿಯಿದೆ. ಕೊರೊನಾ ವಿಷಯದಲ್ಲಿ ಸರ್ಕಾರ