ಬೆಳಗಾವಿ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ (69) ಅವರು ಮಂಗಳವಾರ ಕೆಎಲ್ ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಓಂಪ್ರಕಾಶ್ ಕಣಗಲಿ ಅವರು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.