ಬೆಂಗಳೂರು|
pavithra|
Last Modified ಗುರುವಾರ, 26 ನವೆಂಬರ್ 2020 (12:49 IST)
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಅನಾರೋಗ್ಯದ ಹಿನ್ನಲೆಯಲ್ಲಿ ಜೈಲಿನಲ್ಲಿದ್ದ ರೋಷನ್ ಬೇಗ ಅವರನ್ನು ಜಯದೇವ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬೇಗ್ ಅವರನ್ನು ಕರೆದೊಯ್ಯಲು ಬಂದಿದ್ದ ಸಿಬಿಐ ಟೀಂ ಅವರು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಅಧಿಕಾರಿಗಳು ವಾಪಾಸಾಗಿದ್ದಾರೆ ಎನ್ನಲಾಗಿದೆ.