ಬಿಜೆಪಿ ಮುಖಂಡ ಮಾಜಿ ಸಂಸದ, ಮಾಜಿ ಅರಣ್ಯ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್ಬೈ ಹೇಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನಾಯಕರ ನಡೆಯಿಂದಾಗಿ ಬೇಸರಗೊಂಡಿರುವ ವಿಜಯ್ ಶಂಕರ್, ಬಿಜೆಪಿಗೆ ಗುಡ್ಬೈ ಹೇಳಿದಲ್ಲಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರಿ ಹೊಡೆತ ಬೀಳಲಿದೆ ಎನ್ನಲಾಗುತ್ತಿದೆ. ಬಿಜೆಪಿ ಮುಖಂಡ ವಿಜಯ್ ಶಂಕರ್, ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ