ಬಿಜೆಪಿಯ ಹಾಲಿ ಶಾಸಕ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ಪ್ರತಿ ಕಾಮಗಾರಿಯಲ್ಲಿ ಶೇ. 5ರಷ್ಟು ಕಮೀಷನ್ ನೀಡಬೇಕೆಂದು ಗುತ್ತಿಗೆದಾರರ ಮೇಲೆ ಒತ್ತಡವಿದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಆರೋಪ ಮಾಡಿದ್ದಾರೆ.ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಬಿಜೆಪಿ ಶಾಸಕ ಸುಭಾಷ ಗುತ್ತೇದಾರ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಬಿ.ಆರ್.ಪಾಟೀಲ್ ವಾಗ್ದಾಳಿ ಮುಂದುವರಿಸಿದ್ದಾರೆ.ಆಳಂದ ತಾಲೂಕಿನಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 40 ಕೋಟಿ ರೂ. ಕಾಮಗಾರಿಗಳು ಸ್ಥಗಿತವಾಗಿದೆ.