ಬಿಜೆಪಿ ಪಕ್ಷದ ಹಿರಿಯ ನಾಯಕರ ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಂಸದ ವಿಜಯ್ ಶಂಕರ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಮಾಜಿ ಸಂಸದ, ಮಾಜಿ ಸಚಿವ ವಿಜಯ್ ಶಂಕರ್ ಮೈಸೂರು ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಜಯಗಳಿಸಿ ಸಂಸದರಾಗಿದ್ದರು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು