ಮಾಜಿ ಸಂಸದ ಎಸ್.ಬಿ.ಸಿದ್ನಾಳ್ ನಿಧನ

ಬೆಳಗಾವಿ| pavithra| Last Modified ಮಂಗಳವಾರ, 27 ಏಪ್ರಿಲ್ 2021 (11:31 IST)
ಬೆಳಗಾವಿ : ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ.ಸಿದ್ನಾಳ್ ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಅವರಿಗೆ 86 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕೆಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಸಾಣಿಕೊಪ್ಪದಲ್ಲಿ ನಡೆಯಲಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ಬಾರಿ ಆಯ್ಕೆಯಾಗಿದ್ದ ಸಿದ್ನಾಳ್ ಸತತ 4 ಬಾರಿ ಈ ಕ್ಷೇತ್ರದ ಸಂಸದರಾಗಿದ್ದರು. ಜಿಲ್ಲೆಯ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :